ರೈತ ವಿರೋಧಿ ನೀತಿ ಮತ್ತು ಪೆಟ್ರೋಲ್ ಡೀಜೆಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ. ಇಕ್ಬಾಲ್ ಅನ್ಸಾರಿ ಪಾದಯಾತ್ರೆ.
ತುಂಗಾವಾಣಿ
ಗಂಗಾವತಿ ಫೆ 13 ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ರೈತ ವಿರೋಧಿ ಕಾಯ್ದೆ ಹಾಗು ಪೆಟ್ರೋಲ್ ಡೀಜೆಲ್ ಹಾಗು ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗಂಗಾವತಿ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ನೇತೃತ್ವದಲ್ಲಿ ಸಹಸ್ರಾರು ಕಾರ್ಯಕರ್ತರು ನಗರದ ಸಿಬಿಎಸ್ ವೃತ್ತದಿಂದ ಬಸ್ ಸ್ಟಾಂಡ್ ಮುಂದೆ ಇರುವ ಕೃಷ್ಣದೇವರಾಯ ವೃತ್ತದ ವರೆಗೆ ಪಾದಯಾತ್ರೆ ಮಾಡಲಿದ್ದಾರೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ ಸಹ ಕೇಂದ್ರ ಸರಕಾರವು ಪೆಟ್ರೋಲ್ ಮತ್ತು ಡಿಸೇಲ್ ಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಿ ಜನಸಾಮಾನ್ಯರಿಗೆ ಲೂಟಿ ಮಾಡುತ್ತಿದ್ದು ಇದರ ಜೊತೆಗೆ ಅಗತ್ಯ ವಸ್ತುಗಳ ಬೆಲೆಯೂ ಅವ್ಯಾಹತವಾಗಿ ಏರಿಕೆಯಾಗಿ ಬಡಜನರು ಒಪ್ಪತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಬಂದರೂ ಸಹ ಕೇಂದ್ರದ ಮೋದಿ ಸರಕಾರ ಯಾವುದೇ ಕ್ರಮ ಕೈಗೊಳ್ಳದೇ ಹೊಸ ಹೊಸ ಜನವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸಿ ಇನ್ನಷ್ಟು ಕಷ್ಟ ಕೊಡುತ್ತಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಆದೇಶದ ಮೇರೆಗೆ ಬೃಹತ್ ಪ್ರತಿಭಟನೆ ಹಮ್ಮಿ ಕೊಂಡಿದ್ದು ಗಂಗಾವತಿ ವಿಧಾನ ಸಭಾ ಕ್ಷೇತ್ರದ ಜನರು ಹೆಚ್ಚಿನ ರೀತಿಯಲ್ಲಿ ಈ ಪಾದಯಾತ್ರೆಯಲ್ಲಿ ಭಾಗವಹಿಸಬೇಕೆಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತದ ಸಭೆಯನ್ನು ಉದ್ದೇಶಿಸಿ ಮನವಿ ಮಾಡಿದರು.
ಇಂದು ಬೆಳಿಗ್ಗೆ 11 ಗಂಟೆಗೆ ಸಿಬಿಎಸ್ ವೃತ್ತದಿಂದ ಪಾದಯಾತ್ರೆ ಆರಂಭವಾಗಲಿದ್ದು ಮಹಾವೀರ ಸರ್ಕಲ್ ಗಾಂಧಿ ಸರ್ಕಲ್ ಮುಖಾಂತರ ಕೃಷ್ಣದೇವರಾಯ ವೃತ್ತಕ್ಕೆ ತಲುಪಲಿದೆ. ಪ್ರತಿಭಟನೆಗೆ ಸಹಸ್ರಾರು ಸಂಖ್ಯೆಯಲ್ಲಿ ಜನ ಸೇರಲಿದ್ದು ನಗರದ ಪ್ರಮುಖ ರಸ್ತೆಗಳು ಟ್ರಾಫಿಕ್ ಜಾಮ್ ಆಗಲಿವೆ.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.