ಗಂಗಾವತಿ: ಹೈಟೆಕ್ ವೇಶ್ಯಾವಾಟಿಕ ದಂಧೆ.!
ಮೂವರ ಬಂಧನ.!
ತುಂಗಾವಾಣಿ.
ಗಂಗಾವತಿ: ಮಾ-4 ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮಿ ವೆಂಕಟೇಶ್ವರ ಕಾಲೋನಿಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸಲಾಗಿತ್ತಿದೆ ಎಂದು ಖಚಿತ ದೂರು ಬಂದ ಹಿನ್ನೆಲೆ ನಗರ ಪೋಲಿಸರು ದಾಳಿ ಮಾಡಿ ಇಬ್ಬರು ಮಹಿಳೆಯರು ಸೇರಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ,
DYSP ರುದ್ರೇಶ ಉಜ್ಜನಿಕೊಪ್ಪ ರವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರ ಪೋಲಿಸ್ ಠಾಣೆಯ PI ವೆಂಕಟಸ್ವಾಮಿ, ನಗರದ ಹೊಸಳ್ಳಿ ರಸ್ತೆಯಲ್ಲಿ ಬರುವ ಲಕ್ಷ್ಮೀ ವೆಂಕಟೇಶ್ವರ ಕಾಲೋನಿಯ ಸಿದ್ದಲಿಂಗಯ್ಯ ಸಿದ್ದಪ್ಪ ಎನ್ನುವವರ ಮನೆಯನ್ನು ವಿಜಯಪುರ ಜಿಲ್ಲೆಯ ಬಸವರಾಜ ವಕ್ಕಲಿಗ ಎಂಬ ವ್ಯಕ್ತಿ ಕಳೆದ ಪೆ-20 ರಂದು ಮನೆ ಬಾಡಿಗೆಗೆ ತಗೆದುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾ ಎನ್ನಲಾಗಿದೆ,
ಮೂವರ ಬಂಧನ.!
ಮೂಲತಃ ವಿಜಯಪುರ ಜಿಲ್ಲೆಯವನಾದ ಬಸವರಾಜ ವಕ್ಕಲಿಗ, ಮಹಾರಾಷ್ಟ್ರದ ಪುಣೆ ಹಾಗು ವಿಜಯಪುರದ ಕಡೆಯಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ, ಸಧ್ಯಕ್ಕೆ ಮಹಾರಾಷ್ಟ್ರ ಮೂಲದ ಒಬ್ಬ ಸಂತ್ರಸ್ತೆ ಮತ್ತು ವಿಜಯಪುರ ಜಿಲ್ಲೆಯ ಒಬ್ಬ ಸಂತ್ರಸ್ತೆ, ಇಬ್ಬರೂ ಮಹಿಳೆಯರನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ,
ಬಸವರಾಜ ವಿಜಯಪುರ,
ಮತ್ತು ಸುರೇಶ್ ಸಿಂಧನೂರು,ಬಸವರಾಜ ತೋಟದ ಮಸ್ಕಿ, ಸೇರಿ
ಒಟ್ಟು ಮೂವರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.!?
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.
Tungavani News Latest Online Breaking News