ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕ್ರಿಕೆಟ್ ಗೆ ವಿದಾಯ.
ತುಂಗಾವಾಣಿ.
ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ವಿದಾಯ ಹೇಳಿದ್ದಾರೆ. ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂಎಸ್ ಧೋನಿ ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ನಿಂದ ದೂರ ಉಳಿದಿದ್ದರು. ವಿವಿಧ ಚಟುವಟಿಕೆಗಳ ಮೂಲಕ ರಜೆ ದಿನಗಳನ್ನು ಕಳೆಯುತ್ತಿದ್ದ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ.
ಭಾರತಕ್ಕೆ ಎರಡು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕ ಎಮ್,ಎಸ್ ಧೋನಿ, ಐಪಿಎಲ್ ನಲ್ಲಿ ನಾಯಕನಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಆದರೆ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಧೋನಿ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.