ಸೆ.25ರ ಶುಕ್ರವಾರ ‘ಕರ್ನಾಟಕ ಬಂದ್’ ಆಗಬಹುದು..!
ತುಂಗಾವಾಣಿ.
ದೇಶಾದ್ಯಾಂತ ಭಾರೀ ವಿವಾದ ಸೃಷ್ಟಿಸಿರುವ ಹಾಗೂ ರೈತರ ಪಾಲಿನ ಮರಣ ಶಾಸನ ಎಂದೇ ಆರೋಪಿಸಲಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಸೂದೆ ವಿರೋಧಿಸಿ ಇದೇ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿವೆ.
ರೈತ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್‍ಗೆ ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ ವ್ಯಕ್ತವಾಗುವ ಸಾಧ್ಯತೆಗಳಿವೆ. ರೈತ ಸಂಘಟನೆಗಳು ಮಾತ್ರವಲ್ಲದೆ ನಾರಾಯಣಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು, ಓಲಾ-ಉಬರ್, ಆಟೋ, ಟ್ಯಾಕ್ಸಿ ಸಂಘಟನೆಗಳು ಸೇರಿದಂತೆ 32ಕ್ಕೂ ಹೆಚ್ಚು ಸಂಘ-ಸಂಸ್ಥೆಗಳು ಬೆಂಬಲ ಘೋಷಿಸಲಿವೆ ಎನ್ನಲಾಗಿದೆ..!
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.