ಸೆ.25 ರಂದು ‘ಕರ್ನಾಟಕ ಬಂದ್’ ಇಲ್ಲ
ತುಂಗಾವಾಣಿ.
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರೋಧಿಸಿ ಸೆ.25 ರಂದು ಕರೆ ನೀಡಿದ್ದ ಕರ್ನಾಟಕ ಬಂದ್ ಇಲ್ಲ, ಬಂದ್ ಬದಲು ಹೆದ್ದಾರಿ ಮಾತ್ರ ಬಂದ್ ಮಾಡಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.
ಕರ್ನಾಟಕ ಬಂದ್ ಬದಲಿಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಬಂದ್ ಬಗ್ಗೆ ನಿರ್ಧರಿಸಲಾಗುವುದು, ಬಿಲ್ ಹಿಂಪಡೆಯದಿದ್ರೆ ಬಂದ್ ಗೆ ದಿನಾಂಕ ನಿಗದಿ ಮಾಡಲಾಗುವುದು, ಅಹೋರಾತ್ರಿ ಧರಣಿ ನಡೆಸಲಾಗುವುದು, ಸರ್ಕಾರದ ಮುಂದಿನ ನಡೆ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು, ಸದ್ಯಕ್ಕೆ ಬಂದ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.