Breaking News

ಇನ್ಮೂಂದೆ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಗ್ರಾಮ ವಾಸ್ತವ್ಯ ಮಾಡಲು ಸರಕಾರದ ಆದೇಶ.

ಇನ್ಮೂಂದೆ ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳ ಗ್ರಾಮ ವಾಸ್ತವ್ಯ ಮಾಡಲು ಸರಕಾರದ ಆದೇಶ.


ತುಂಗಾವಾಣಿ
ಬೆಂಗಳೂರು ಜ-20 ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಇತರ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವ ಬಗ್ಗೆ . ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ 29 / 01 / 2020 ರಂದು ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಗ್ರಾಮಗಳಿಗೆ ಭೇಟಿ ನೀಡಲು ಸೂಚಿಸಿರುವಂತೆ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಕೆಳಮಟ್ಟದ ಎಲ್ಲಾ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳು ಸರಕಾರ ಹೊರಡಿಸಿದೆ.

ಜಿಲ್ಲಾಧಿಕಾರಿಗಳು , ಭೂದಾಖಲೆಗಳ ಉಪ ನಿರ್ದೇಶಕರು , ಭೂದಾಖಲೆಗಳ ಸಹಾಯಕ ನಿರ್ದೇಶಕರು ಪ್ರತಿ ತಿಂಗಳ ಮೂರನೇ ಶನಿವಾರದಂದು ಉಪ ವಿಭಾಗದ ಸಹಾಯಕ ಆಯುಕ್ತರು , ಸಂಬಂಧಪಟ್ಟ ತಹಶೀಲ್ದಾರ್‌ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮಗಳಿಗೆ ಭೇಟಿ ನೀಡುವುದು . ಹಾಗೂ ಹಳ್ಳಿ ವಾಸ್ತವ್ಯ ಮಾಡುವುದು.

2 ) ಜಿಲ್ಲಾಧಿಕಾರಿಗಳು ಯಾವ ತಾಲ್ಲೂಕಿಗೆ ಭೇಟಿ ನೀಡುತ್ತಾರೊ ಆ ತಾಲ್ಲೂಕಿನ ತಹಶೀಲ್ದಾರರನ್ನು ಹೊರತುಪಡಿಸಿ , ಉಳಿದ ತಾಲ್ಲೂಕು ತಹಶೀಲ್ದಾರ್‌ಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಪ್ರತಿ ತಿಂಗಳು ಮೂರನೇ ಶನಿವಾರದಂದು ಭೇಟಿ ನೀಡಿ ಹಳ್ಳಿ ವಾಸ್ತವ್ಯ ಮಾಡುವುದು.

3 ) ಅಧಿಕಾರಿಗಳ ಭೇಟೆ ಸಮಯ ಬೆಳಿಗ್ಗೆ 10.00 ರಿಂದ 5.00 ಘಂಟೆಯವರೆಗೆ ನಿಗದಿಪಡಿಸಿ , ನಿಗದಿತ ಸಮಯಕ್ಕೆ ಸರಿಯಾಗಿ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡುವುದು .

4 ) ಗ್ರಾಮಗಳಿಗೆ ಭೇಟಿ ನಿಗದಿಪಡಿಸಿದ ದಿನಾಂಕವು ರಜಾ ದಿನವಾಗಿದ್ದಲ್ಲಿ ಮುಂದಿನ ಕೆಲಸದ ದಿನಕ್ಕೆ ನಿಗದಿಪಡಿಸುವುದು.

5 ) ಗ್ರಾಮಗಳನ್ನು ತಲುಪುವುದಕ್ಕೆ ಸೂಕ್ತವಾದ ಸಾರಿಗೆ ವ್ಯವಸ್ಥೆಯನ್ನು ಜಿಲ್ಲಾಧಿಕಾರಿಗಳು ಅವರ ಮಟ್ಟದಲ್ಲಿ ಸೂಚನೆಯನ್ನು ನೀಡಬೇಕು.

6)ಗ್ರಾಮಗಳಿಗೆ ಭೇಟಿ ನೀಡುವ ಒಂದು ವಾರದ ಮೊದಲೇ ಕಂದಾಯ ಅಧಿಕಾರಿಗಳು , ಗ್ರಾಮ ಭೇಟಿ ಸಂದರ್ಭದಲ್ಲಿ ನೀಡಲಾಗಿರುವ ಕಾರ್ಯಸೂಚಿಗಳನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ , ಅರ್ಜಿಗಳ ಮೇಲೆ ಯಾರ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಲೇವಾರಿಯಾಗಿರುವ ಬಗ್ಗೆ ಸಂಬಂಧಪಟ್ಟ ಫಲಾನುಭವಿಗಳಿಗೆ ತಿಳಿಸುವುದು . ಅರ್ಜಿಗಳ ಮೇಲೆ ಬೇರೆ ಬೇರೆ ಹಂತದಲ್ಲಿ ವಿಚಾರಣೆಯ ಅವಶ್ಯಕತೆ ಇದ್ದಲ್ಲಿ ಅದನ್ನು ಪೂರ್ಣಗೊಳಿಸಲು ಕ್ರಮ ತೆಗೆದುಕೊಳ್ಳುವುದು.

7) ಭೇಟಿ ನೀಡಿದ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು , ಪಹಣಿ ಕಾಲಂ 3 ಮತ್ತು ಅಕಾರ್ ಬಂದ್ ತಾಳೆಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು.

8 ) ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ 3 ಮತ್ತು ಕಾಲಂ 9 ತಾಳೆ ಹೊಂದುವಂತೆ ಸೂಕ್ತ ಆದೇಶಗಳನ್ನು ಹೊರಡಿಸುವುದು.

9 ) ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ವಹಿಸುವುದು.

10 ) ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು .

11 ) ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು.

12 ) ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನಿನ ಕಾಯ್ದಿರಿಸಲು ಕ್ರಮ ವಹಿಸುವುದು.

13 ) ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸುವುದು .
14 ) ಆಧಾರ್ ಕಾರ್ಡಿನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು.

15 ) ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆನ್‌ಲೈನ್ ಮುಖಾಂತರ . ಸಂಬಂಧಪಟ್ಟ ನಾಡ ಕಛೇರಿಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

16 ) ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು.

17 ) ಮತದಾರರ ಪಟ್ಟಿ ಪರಿಷ್ಕರಣೆ .
18 ) ಬರ / ಪ್ರವಾಹ ಇದ್ದಲ್ಲಿ ಪರಿಹಾರ .
19 ) ಪ್ರವಾಹದ ಹಾನಿ ತಡೆಗಟ್ಟಲು ಸಲಹೆ ನೀಡುವುದು .
20 ) ಅತೀವೃಷ್ಠಿ / ಅನಾವೃಷ್ಟಿ ಎದುರಿಸಲು ಮುಂಜಾಗೃತೆ ಕ್ರಮ.

21 ) ಹದ್ದು ಬಸ್ತು , ಪೋಡಿ , ಪೋಡಿ ಮುಕ್ತಗಾಮ , ದರಕಾಸ್ತು ಪೋಡಿ ( ನಮೂನೆ 1-5 ಮತ್ತು ನಮೂನೆ 6-10ನ್ನು ಭರ್ತಿ ಮಾಡಿ ದರಕಾಸ್ತು ಮೋಡಿ ಮಾಡುವುದು ) , ಕಂದಾಯ ಗ್ರಾಮಗಳ ರಚನೆ.


22 ) ಗ್ರಾಮದಲ್ಲಿ ಎಸ್‌ಸಿ / ಎಸ್‌ಟಿ / ಬಿಸಿಎಂ ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮವಹಿಸುವುದು.

23 ) ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ , ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲಿಸುವುದು.

24 ) ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮವಹಿಸುವುದು.

25 ) ಗುಡಿಸಲು ರಹಿತ ವಾಸದ ಮನೆಗಳ ನಿರ್ಮಾಣ : ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ವಿವಿಧ ಯೋಜನೆಗಳಡಿ ಮನೆ ಕಟ್ಟಲು ಅನುದಾನ ನೀಡುವಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನವನ್ನು ನೀಡಿ ಆ ಗ್ರಾಮದ ಗುಡಿಸಲು ರಹಿತ ವಾಸದ ಮನೆ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ . ಸರ್ಕಾರದ ಮೇಲ್ಕಂಡ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿ ಸರ್ಕಾರದ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಸುತ್ತೊಲೆ ಹೊರಡಿಸಿದ್ದಾರೆ. ಆದರೆ ಈ ಆದೇಶ ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತೆ ಕಾದು ನೋಡಬೇಕಿದೆ..!

ತುಂಗಾವಾಣಿ ಗುಂಪಿಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

https://chat.whatsapp.com/EU4kU5kYYQkKKu7fRyOpXF

ನೈಜ ಸುದ್ದಿಗಳಿಗಾಗಿ ತುಂಗಾವಾಣಿ ಓದಿರಿ.

Check Also

ಕೊಪ್ಪಳ ಜಿಲ್ಲೆಯಲ್ಲಿ ಇನ್ಮೂಂದೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿಗುತ್ತೆ.ಮರಳು.(ಉಸುಗು)

ಕೊಪ್ಪಳ ಜಿಲ್ಲೆಯಲ್ಲಿ ಇನ್ಮೂಂದೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಿಗುತ್ತೆ.ಮರಳು.(ಉಸುಗು) ತುಂಗಾವಾಣಿ. ಕೊಪ್ಪಳ: ಆ17, ಜಿಲ್ಲೆಯ ಗಂಗಾವತಿ ನಗರದ ಮಂಥನ ಸಭಾಂಗಣದಲ್ಲಿ …