ಸುಳ್ಳು ಜಾತಿ ಪ್ರಮಾಣಪತ್ರ: ಗ್ರಾಪಂ ಸದಸ್ಯನ ವಿರುದ್ಧ ಪ್ರಕರಣ ದಾಖಲು.
ತುಂಗಾವಾಣಿ. ಗಂಗಾವತಿ: ಅ-30 ತಾಲೂಕಿನ ಕೆಸರಹಟ್ಟಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಲು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ ಆರೋಪದಲ್ಲಿ ಕೆಸರಹಟ್ಟಿ ಗ್ರಾಪಂ ಸದಸ್ಯರಾದ ನಿವೃತ್ತಿ ನೌಕರ ಜಗದೀಶ್ ಪಂಪಣ್ಣ ಅಂಗಡಿ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದುಳಿದ ವರ್ಗ “ಬ” ಅಭ್ಯರ್ಥಿಗಳು ಸ್ಪರ್ಧಿಸಲು ಮೀಸಲು ಮಾಡಿದ ಕ್ಷೇತ್ರ ವಾಗಿದ್ದು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾಗಿದ್ದರು. ಅವರ ಸದಸ್ಯತ್ವ ರದ್ದು ಮಾಡಬೇಕೆಂದು ಕಾನೂನು ಹೋರಾಟ ಮಾಡಿ ನ್ಯಾಯಾಲಯದ ಮುಖಾಂತರ ಅ-29 ರಂದು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಚನ್ನವೀರಯ್ಯ ಪಂಪಯ್ಯ ಎಂಬುವವರು ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.