ಅಪಘಾತ ವ್ಯಕ್ತಿ ಸಾವು
ತುಂಗಾವಾಣಿ
ಗಂಗಾವತಿ ನ 26 ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಹತ್ತಿರ ಆಂದ್ರ ಮೂಲದ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೆ ಮೃತ ಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಕುಷ್ಟಗಿ ತಾಲೂಕಿನವರಾದ ಪ್ರವೀಣ ಕುಮಾರ ಶ್ರೀರಾಮನಗರದ ವಿದ್ಯಾನಿಕೇತನ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು ವಯಕ್ತಿಕ ಕೆಲಸಕ್ಕಾಗಿ ಗಂಗಾವತಿಗೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿ.ಐ.ಉದಯರವಿಯವರು ತೆರಳಿ ಮಾಹಿತಿ ಕಲೆ ಹಾಕಿ ತನಿಖೆ ಕೈಗೊಂಡಿದ್ದಾರೆ.!
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ